Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:27 - ಪರಿಶುದ್ದ ಬೈಬಲ್‌

27 ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಗೇರ್ಷೋನ್ಯರ ಕುಟುಂಬ಼ಗಳಿಗೆ ಅರ್ಧ ಮನಸ್ಸೆಯವರ ಸೊತ್ತಿನಿಂದ ದೊರಕಿದವುಗಳು ಇವು: ಕೊಲೆ ಮಾಡಿದವನಿಗೆ ಆಶ್ರಯನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ನಗರಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಗೇರ್ಷೋನ್ಯರ ಕುಟುಂಬಗಳಿಗೆ ಅರ್ಧಮನಸ್ಸೆಯವರ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಲೇವಿ ಗೋತ್ರದ ಗೇರ್ಷೋನ್ಯರಿಗೆ ಮನಸ್ಸೆಯ ಅರ್ಧಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿನಲ್ಲಿರುವ ಗೋಲಾನನ್ನೂ ಬೆಯೆಷ್ಟೆರಾವನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:27
8 ತಿಳಿವುಗಳ ಹೋಲಿಕೆ  

ಗೇರ್ಷೋಮ್ ಕುಟುಂಬದವರಿಗೆ ಮನಸ್ಸೆಯ ಅರ್ಧಕುಲದವರಿಂದ ಬಾಷಾನಿನಲ್ಲಿರುವ ಗೋಲಾನ್ ಮತ್ತು ಅಷ್ಟಾರೋಟ್ ಎಂಬ ಪಟ್ಟಣಗಳೂ ಅದಕ್ಕೆ ಸೇರಿದ ಹೊಲಗಳೂ ದೊರೆತವು.


ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.


ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.


ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)


ಕೆಹಾತ್ಯ ಕುಟುಂಬದ ಉಳಿದ ಜನರು ಒಟ್ಟಿನಲ್ಲಿ ಹತ್ತು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪಭೂಮಿಯನ್ನು ಪಡೆದರು.


ಇಸ್ಸಾಕಾರ್ ಕುಲದವರು ಕಿಷ್ಯೋನ್, ದಾಬೆರತ್,


ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.


ಶೆಮೆರನು ಮಹ್ಲೀಯನ ಮಗ. ಮಹ್ಲೀಯನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ. ಮೆರಾರಿಯು ಲೇವಿಯ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು