Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:38 - ಪರಿಶುದ್ದ ಬೈಬಲ್‌

38 ಗಾದ್ಯರು ಅವರಿಗೆ ಗಿಲ್ಯಾದಿನ ಆಶ್ರಯನಗರವಾದ ರಾಮೋತ್, ಮಹನಯೀಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಗಾದ್ಯರ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾಗಿರುವ ಗಿಲ್ಯಾದಿನ ರಾಮೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:38
14 ತಿಳಿವುಗಳ ಹೋಲಿಕೆ  

ಆದ್ದರಿಂದ ಅವನು, “ಇದು ದೇವರ ಪಾಳೆಯ” ಎಂದು ಹೇಳಿ “ಮಹನಯಿಮ್” ಎಂದು ಹೆಸರಿಟ್ಟನು.


ಮೆರಾರೀ ಸಂತಾನದವರಿಗೆ ಗಾದ್ ಸಂತತಿಯವರ ಪ್ರದೇಶದಿಂದ ಗಿಲ್ಯಾದಿನ ರಾಮೋತ್, ಮಹನಯಿಮ್, ಹೆಷ್ಬೋನ್ ಮತ್ತು ಯಗ್ಜೇರ್ ಪಟ್ಟಣಗಳೂ ಅದರ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು.


ಆ ಸಮಯದಲ್ಲಿ, ಅಹಾಬನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ರಾಜನು ಗಿಲ್ಯಾದಿನ ರಾಮೋತ್ ಪಟ್ಟಣವನ್ನು ನಮ್ಮಿಂದ ತೆಗೆದುಕೊಂಡದ್ದನ್ನು ಜ್ಞಾಪಿಸಿಕೊಳ್ಳಿರಿ? ರಾಮೋತನ್ನು ಹಿಂದಕ್ಕೆ ಪಡೆಯಲು ನಾವು ಏನನ್ನೂ ಮಾಡಲಿಲ್ಲವೇಕೆ? ಅದು ನಮ್ಮ ಪಟ್ಟಣ” ಎಂದು ಹೇಳಿದನು.


ಬರ್ಜಿಲ್ಲೈಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು.


ದಾವೀದನು ಮಹನಯಿಮಿಗೆ ಬಂದನು. ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು.


ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.


ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.


ಕೆದೇಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೇನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.


ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.


ಆ ಪ್ರದೇಶವು ಹೆಷ್ಬೋನ್‌ನಿಂದ ರಾಮತ್‌ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು.


ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ.


ಮಹನಯಿಮಿಗೆ ಇದ್ದೋವಿನ ಮಗನಾದ ಅಹೀನಾದಾಬನು ರಾಜ್ಯಪಾಲನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು