Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:44 - ಪರಿಶುದ್ದ ಬೈಬಲ್‌

44 ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಯಲ್ಲಿಯೂ ಸಮಾಧಾನಕೊಟ್ಟನು. ವೈರಿಗಳಲ್ಲಿ ಒಬ್ಬನೂ ಅವರ ಮುಂದೆ ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:44
19 ತಿಳಿವುಗಳ ಹೋಲಿಕೆ  

ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.


ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.


ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.


“ಯೆಹೋವನ ಸೇವಕನಾದ ಮೋಶೆಯು ನಿಮಗೆ ಹೇಳಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ವಿಶ್ರಾಂತಿಗಾಗಿ ಒಂದು ದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದನು.


ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.


“ನೀವು ನಿಮ್ಮ ಶತ್ರುಗಳೊಂದಿಗೆ ಯುದ್ಧಮಾಡಿ ದೇವರ ಸಹಾಯದಿಂದ ಅವರನ್ನು ಸೋಲಿಸುವಿರಿ. ನೀವು ನಿಮ್ಮ ಶತ್ರುಗಳನ್ನು ಸೆರೆಹಿಡಿದು ಕೊಂಡೊಯ್ಯುವಿರಿ.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ಹೊಲದಲ್ಲಿ ನಡೆಯುತ್ತಿರುವಾಗ ಒಂದು ದನವೂ ಬೀಳಲಿಲ್ಲ. ಅದೇ ರೀತಿಯಲ್ಲಿ ಸಮುದ್ರದ ಮಧ್ಯದಲ್ಲಿ ನಡೆಯುವಾಗ ಅವರು ಬೀಳಲಿಲ್ಲ. ವಿಶ್ರಾಂತಿಯ ಸ್ಥಳಕ್ಕೆ ಯೆಹೋವನ ಆತ್ಮವು ಅವರನ್ನು ನಡೆಸಿತು. ದಾರಿಯುದ್ದಕ್ಕೂ ಜನರು ಸುರಕ್ಷಿತರಾಗಿದ್ದರು. ಯೆಹೋವನೇ, ಹೀಗೆ ನೀನು ನಿನ್ನ ಜನರನ್ನು ನಡೆಸಿದೆ. ಹೀಗೆ ನೀನು ನಿನ್ನ ಹೆಸರನ್ನು ಆಶ್ಚರ್ಯಕರವನ್ನಾಗಿ ಮಾಡಿರುವೆ.


ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.


ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನುಕೊಟ್ಟು ಓಡಿಹೋಗುವಂತೆ ದೇವರು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು