ಯೆಹೋಶುವ 21:6 - ಪರಿಶುದ್ದ ಬೈಬಲ್6 ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮತ್ತೆ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದ ಹದಿಮೂರು ನಗರಗಳು ದೊರೆತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತಿರಿಗಿ ಚೀಟುಹಾಕುವಲ್ಲಿ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದಲೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು. ಅಧ್ಯಾಯವನ್ನು ನೋಡಿ |