Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:7 - ಪರಿಶುದ್ದ ಬೈಬಲ್‌

7 ಮೆರಾರೀ ಗೋತ್ರದವರಿಗೆ ಹನ್ನೆರಡು ಪಟ್ಟಣಗಳನ್ನು ಕೊಡಲಾಯಿತು. ಈ ಹನ್ನೆರಡು ಪಟ್ಟಣಗಳು ರೂಬೇನ್, ಗಾದ್ ಮತ್ತು ಜೆಬುಲೂನ್ ಕುಲಗಳಿಗೆ ಸೇರಿದ ಪ್ರದೇಶಗಳಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೆರಾರಿ ಗೋತ್ರದವರಿಗೆ ರೂಬೇನ್, ಗಾದ್ ಹಾಗೂ ಜೆಬುಲೂನ್ ಕುಲಗಳಿಂದ ಹನ್ನೆರಡು ನಗರಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಮೆರಾರೀಯರಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ, ಗಾದನ ಗೋತ್ರದಲ್ಲಿಯೂ, ಜೆಬುಲೂನನ ಗೋತ್ರದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:7
8 ತಿಳಿವುಗಳ ಹೋಲಿಕೆ  

ಮೆರಾರೀ ಸಂತತಿಯವರಿಗೆ ಹನ್ನೆರಡು ಪಟ್ಟಣಗಳು ದೊರೆತವು. ಇವು ರೂಬೇನ್, ಗಾದ್, ಜೆಬುಲೂನ್ ಕುಲದವರ ಸ್ವಾಸ್ತ್ಯದಿಂದ ದೊರೆತವು. ಅವರು ಇದಕ್ಕಾಗಿ ಚೀಟುಹಾಕಿದರು.


ಮೆರಾರೀಯ ಗೋತ್ರಗಳು: ಮಹ್ಲೀ ಮತ್ತು ಮೂಷೀ. ಅವು ಲೇವಿ ಕುಲದ ಗೋತ್ರಗಳಾಗಿವೆ.


ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ.


ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.


ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು.


ಗೇರ್ಷೋಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರಕಿದವು. ಇವು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧ ಮನಸ್ಸೆ ಕುಲದವರಿಂದ ಆ ಪಟ್ಟಣಗಳು ದೊರೆತವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು