ಯೆಹೋಶುವ 22:10 - ಪರಿಶುದ್ದ ಬೈಬಲ್10 ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಆ ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದಲ್ಲಿರುವ ಯೊರ್ದನ್ ತೀರ ಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾವೇದಿಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು. ಅಧ್ಯಾಯವನ್ನು ನೋಡಿ |
ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.