Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:15 - ಪರಿಶುದ್ದ ಬೈಬಲ್‌

15 ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:15
31 ತಿಳಿವುಗಳ ಹೋಲಿಕೆ  

ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ನಮ್ಮ ಪ್ರಭುವಾದ ಯೇಸುವಿನ ಹೆಸರಿನಲ್ಲಿ ಒಟ್ಟಾಗಿ ಸೇರಿಬನ್ನಿ. ನಾನು ಆತ್ಮದಲ್ಲಿ ನಿಮ್ಮೊಂದಿಗಿರುವೆನು. ನಮ್ಮ ಪ್ರಭುವಾದ ಯೇಸುವಿನ ಶಕ್ತಿಯೂ ನಿಮ್ಮೊಂದಿಗೆ ಇರುವುದು.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


“ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”


ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.


ಈ ನಾಯಕರುಗಳು ಇಸ್ರೇಲರ ಸೈನಿಕರಿಗೆ, “ಯೆಹೂದದೇಶದಿಂದ ಸೆರೆಯವರನ್ನು ಇಲ್ಲಿಗೆ ತರಬೇಡಿ. ನೀವು ಹಾಗೆ ಮಾಡಿದರೆ ಅದು ನಿಮ್ಮ ಪಾಪವನ್ನೂ ದೋಷವನ್ನೂ ಮತ್ತಷ್ಟು ಹೆಚ್ಚಿಸುತ್ತದೆ. ಯೆಹೋವನು ಇಸ್ರೇಲರ ಮೇಲೆ ತುಂಬಾ ಸಿಟ್ಟುಗೊಳ್ಳುವನು” ಎಂದು ಹೇಳಿದರು.


“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.


ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.


ಅಂದಿನಿಂದ ಇಂದಿನವರೆಗೆ ಇಸ್ರೇಲರು ದಾವೀದನ ಕುಟುಂಬಕ್ಕೆ ವಿರುದ್ಧವಾದರು.


ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಈಗ ನೀವು ಅದನ್ನೇ ಮಾಡುತ್ತಿದ್ದೀರಿ. ನೀವು ಯೆಹೋವನಿಗೆ ವಿಮುಖರಾಗುತ್ತಿದ್ದೀರಿ. ನೀವು ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ, ಪ್ರತಿಯೊಬ್ಬ ಇಸ್ರೇಲಿನವನ ಮೇಲೆಯೂ ಯೆಹೋವನು ಕೋಪಿಸಿಕೊಳ್ಳುವನು.


ಇಸ್ರೇಲರೆಲ್ಲರು ಈ ಮೂರು ಕುಲಗಳ ಮೇಲೆ ತುಂಬ ಕೋಪಗೊಂಡರು. ಅವರು ಒಟ್ಟಿಗೆ ಮೂರು ಕುಲಗಳ ವಿರುದ್ಧ ಯುದ್ಧಮಾಡಲು ನಿರ್ಧರಿಸಿದರು.


ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,


ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.


ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.


ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.


“ಇದನ್ನು ಇಸ್ರೇಲರಿಗೆ ತಿಳಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಆಸ್ತಿಯ ವಿಷಯದಲ್ಲಿ ಮೋಸಗೊಳಿಸಿದರೆ ಅವನು ಸುಳ್ಳುಪ್ರಮಾಣ ಮಾಡುವುದರ ಮೂಲಕ ಯೆಹೋವನಿಗೆ ವಿರೋಧವಾಗಿ ಹೊಲಸಾದ ಕಾರ್ಯವನ್ನು ಮಾಡಿದಂತಾಯಿತು. ಆದ್ದರಿಂದ ಅವನು ದೋಷಿಯಾಗಿದ್ದಾನೆ.


“ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು


ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.”


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


“ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನೆಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೇಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೇಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೇಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು