Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:17 - ಪರಿಶುದ್ದ ಬೈಬಲ್‌

17 ಪೆಗೋರ್‌ನಲ್ಲಿ ಏನಾಯಿತೆಂಬುದನ್ನು ಸ್ಮರಿಸಿಕೊಳ್ಳಿ ಆ ಪಾಪಕ್ಕಾಗಿ ನಾವು ಇನ್ನೂ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ದೇವರು ನಮ್ಮಲ್ಲಿ ಬಹಳಷ್ಟು ಜನರನ್ನು ರೋಗಗ್ರಸ್ತರನ್ನಾಗಿ ಮಾಡಿದನು. ಆ ರೋಗದಿಂದ ಇಂದಿಗೂ ನಾವು ಕಷ್ಟಪಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೆ? ಅದರ ನಿಮಿತ್ತ ಸರ್ವೇಶ್ವರನ ಸಭೆಗೇ ಜಾಡ್ಯ ತಗಲಿತು. ಆದ್ದರಿಂದ ನಾವು ಇಂದಿಗೂ ಶುದ್ಧರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾವು ಪೆಗೋರದ ಸಂಗತಿಯಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ಅದು ಇನ್ನೂ ಶುದ್ಧವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪೆಯೋರದವರ ದುಷ್ಟತನವು ನಮಗೆ ಅಲ್ಪವೋ? ಯೆಹೋವ ದೇವರ ಜನರ ಮೇಲೆ ವ್ಯಾಧಿ ಬಂದಿದ್ದರೂ ಈ ದಿನದವರೆಗೂ ಆ ಪಾಪದಿಂದ ನಾವು ಶುದ್ಧವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:17
6 ತಿಳಿವುಗಳ ಹೋಲಿಕೆ  

ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.


ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು