Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:18 - ಪರಿಶುದ್ದ ಬೈಬಲ್‌

18 ಈಗ ನೀವು ಅದನ್ನೇ ಮಾಡುತ್ತಿದ್ದೀರಿ. ನೀವು ಯೆಹೋವನಿಗೆ ವಿಮುಖರಾಗುತ್ತಿದ್ದೀರಿ. ನೀವು ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ, ಪ್ರತಿಯೊಬ್ಬ ಇಸ್ರೇಲಿನವನ ಮೇಲೆಯೂ ಯೆಹೋವನು ಕೋಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಂತಿರುವಲ್ಲಿ ನೀವು ಮತ್ತೆ ಸರ್ವೇಶ್ವರನನ್ನು ಬಿಟ್ಟುಬಿಡುತ್ತೀರೋ? ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದರೆ ನಾಳೆಯೇ ಅವರ ಕೋಪಾಗ್ನಿ ಇಸ್ರಯೇಲ್ ಸರ್ವಸಭೆಯ ಮೇಲೆ ಉರಿಯತೊಡಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈಗ ನೀವು ತಿರಿಗಿ ಯೆಹೋವನನ್ನು ಬಿಡುತ್ತೀರೋ? ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದರೆ ನಾಳೆಯೇ ಆತನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯಹತ್ತುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? “ ‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:18
20 ತಿಳಿವುಗಳ ಹೋಲಿಕೆ  

ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


“ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನೆಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೇಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೇಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೇಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲಿರಿ.


ಇಸ್ರೇಲ್ ಜನರ ಬಳಿ ನಾನಾ ಜನಾಂಗದವರ ವಿಗ್ರಹಗಳಿದ್ದವು. ಆದರೆ ಯೋಷೀಯನು ಆ ವಿಗ್ರಹಗಳನ್ನೆಲ್ಲಾ ನಾಶಮಾಡಿದನು. ಇಸ್ರೇಲರು ದೇವರಾದ ಯೆಹೋವನ ಸೇವೆಮಾಡುವಂತೆ ಯೋಷೀಯನು ಮಾಡಿದನು. ಯೋಷೀಯನು ಬದುಕಿದ್ದಷ್ಟು ಕಾಲ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಸೇವೆಮಾಡಿದರು.


ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.


ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಪ್ಪತ್ತು ಸಾವಿರ ಜನರು ಸತ್ತುಹೋದರು.


ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.


ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.


“ಆದರೆ ನೀನಾಗಲಿ ನಿನ್ನ ಮಕ್ಕಳಾಗಲಿ ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದರೆ, ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ಅನುಸರಿಸದಿದ್ದರೆ, ಅನ್ಯದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ನೀನು ಮಾಡಿದರೆ, ನಾನು ದಯಪಾಲಿಸಿರುವ ದೇಶವನ್ನು ಬಿಟ್ಟುಹೋಗುವಂತೆ ನಾನು ಇಸ್ರೇಲರನ್ನು ಬಲಾತ್ಕರಿಸುತ್ತೇನೆ. ಅನ್ಯಜನರಿಗೆ ಇಸ್ರೇಲರು ಉದಾಹರಣೆಯಾಗುತ್ತಾರೆ. ಅನ್ಯಜನರು ಇಸ್ರೇಲರನ್ನು ಅಪಹಾಸ್ಯ ಮಾಡುತ್ತಾರೆ. ನಾನು ಈ ಆಲಯವನ್ನು ಪವಿತ್ರವನ್ನಾಗಿಸಿದೆ. ಜನರು ನನ್ನನ್ನು ಗೌರವಿಸುವ ಸ್ಥಳ ಅದಾಗಿದೆ. ಆದರೆ ನೀನು ನನ್ನನ್ನು ಅನುಸರಿಸದೆ ಇದ್ದರೆ, ಆಗ ನಾನದನ್ನು ಧೂಳೀಪಟ ಮಾಡುತ್ತೇನೆ.


ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.


ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ.


“‘ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು’” ಎಂದರು.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.


ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.


ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು