ಯೆಹೋಶುವ 22:23 - ಪರಿಶುದ್ದ ಬೈಬಲ್23 ನಾವು ದೇವರ ಕಟ್ಟಳೆಗಳನ್ನು ಉಲ್ಲಂಘಿಸಿದ್ದರೆ ಯೆಹೋವನೇ ನಮ್ಮನ್ನು ಶಿಕ್ಷಿಸಲಿ ಎಂದು ಆತನಲ್ಲಿ ಕೇಳಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವದಕ್ಕೋಸ್ಕರ ಈ ವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ. ಅಧ್ಯಾಯವನ್ನು ನೋಡಿ |
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.
ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯಸಮರ್ಪಣೆ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿದ್ದೇವೆ ಎಂದು ನೀವು ತಿಳಿದಿರುವಿರೇನು? ಇಲ್ಲ! ನಾವು ಆ ಕಾರಣಕ್ಕಾಗಿ ಇದನ್ನು ಕಟ್ಟಲಿಲ್ಲ. ನಾವು ಈ ಯಜ್ಞವೇದಿಕೆಯನ್ನು ಕಟ್ಟಿರುವುದಕ್ಕೆ ಕಾರಣವೇನೆಂದರೆ ಮುಂದಿನ ಕಾಲದಲ್ಲಿ ನಿಮ್ಮ ಜನರು ನಮ್ಮನ್ನು ತಮ್ಮ ಜನಾಂಗದ ಒಂದು ಭಾಗವೆಂದು ಸ್ವೀಕರಿಸದೆ ಇಸ್ರೇಲಿನ ದೇವರಾದ ಯೆಹೋವನನ್ನು ಆರಾಧಿಸಲು ಅವಕಾಶಕೊಡದಿರಬಹುದು ಎಂಬ ಭಯ ನಮಗಿತ್ತು.