ಯೆಹೋಶುವ 22:24 - ಪರಿಶುದ್ದ ಬೈಬಲ್24 ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯಸಮರ್ಪಣೆ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿದ್ದೇವೆ ಎಂದು ನೀವು ತಿಳಿದಿರುವಿರೇನು? ಇಲ್ಲ! ನಾವು ಆ ಕಾರಣಕ್ಕಾಗಿ ಇದನ್ನು ಕಟ್ಟಲಿಲ್ಲ. ನಾವು ಈ ಯಜ್ಞವೇದಿಕೆಯನ್ನು ಕಟ್ಟಿರುವುದಕ್ಕೆ ಕಾರಣವೇನೆಂದರೆ ಮುಂದಿನ ಕಾಲದಲ್ಲಿ ನಿಮ್ಮ ಜನರು ನಮ್ಮನ್ನು ತಮ್ಮ ಜನಾಂಗದ ಒಂದು ಭಾಗವೆಂದು ಸ್ವೀಕರಿಸದೆ ಇಸ್ರೇಲಿನ ದೇವರಾದ ಯೆಹೋವನನ್ನು ಆರಾಧಿಸಲು ಅವಕಾಶಕೊಡದಿರಬಹುದು ಎಂಬ ಭಯ ನಮಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾವು ಇದನ್ನು ಕಟ್ಟಿದ್ದು ಒಂದು ವಿಶೇಷ ಉದ್ದೇಶಕ್ಕಾಗಿ; ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಯೇಲಿನ ದೇವರಾದ ಸರ್ವೇಶ್ವರನಲ್ಲಿ ನಿಮಗೇನು ಪಾಲಿದೆ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ? ಅಧ್ಯಾಯವನ್ನು ನೋಡಿ |
ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತುಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.