ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತುಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.
ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.
“ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.
ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.