27 ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.
27 ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.
27 ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.
27 ಆದರೆ ಯೆಹೋವನ ಸಾನ್ನಿಧ್ಯದಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವದಕ್ಕೆ ನಮಗೂ ಹಕ್ಕುಂಟೆಂಬದಕ್ಕೆ ಇದು ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವದಕ್ಕೆ ಆಸ್ಪದವಿಲ್ಲ.
27 ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.
ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.
ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.
ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.
ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.
ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಆ ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಞವೇದಿಕೆಯನ್ನು ಕಟ್ಟಿದರು.
ಈ ಕಲ್ಲುಗಳ ಕುಪ್ಪೆಯೂ ವಿಶೇಷವಾದ ಈ ಕಲ್ಲೂ ನಮ್ಮ ಒಪ್ಪಂದವನ್ನು ನೆನಪುಮಾಡಿಕೊಳ್ಳಲು ನಮ್ಮಿಬ್ಬರಿಗೂ ಸಹಾಯ ಮಾಡುತ್ತವೆ. ನಾನು ನಿನಗೆ ವಿರೋಧವಾಗಿ ಹೋರಾಡುವುದಕ್ಕಾಗಿ ಈ ಕಲ್ಲುಗಳನ್ನು ದಾಟಿ ಬರುವುದಿಲ್ಲ. ನೀನು ನನಗೆ ವಿರೋಧವಾಗಿ ಈ ಕಲ್ಲುಗಳನ್ನು ದಾಟಿ ನನ್ನ ಕಡೆಗೆ ಬರಕೂಡದು.
ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು.