ಯೆಹೋಶುವ 22:29 - ಪರಿಶುದ್ದ ಬೈಬಲ್29 “ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಮ್ಮ ದೇವರಾದ ಸರ್ವೇಶ್ವರನ ಗುಡಾರದ ಮುಂದಿರುವ ಬಲಿಪೀಠದ ಹೊರತು ದಹನಬಲಿ, ಧಾನ್ಯನೈವೇದ್ಯ, ಸಮಾಧಾನಬಲಿ ಮೊದಲಾದವುಗಳನ್ನು ಸಮರ್ಪಿಸಲು ಬೇರೊಂದು ಬಲಿಪೀಠವನ್ನು ಕಟ್ಟಿ ಸರ್ವೇಶ್ವರನಿಗೆ ವಿಮುಖರಾಗಿ ದ್ರೋಹಿಗಳಾಗುವುದು ನಮಗೆ ದೂರ ಆಗಿರಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸುವದಕ್ಕೋಸ್ಕರ ಬೇರೊಂದು ವೇದಿಯನ್ನು ಕಟ್ಟಿ ಯೆಹೋವನಿಗೆ ವಿಮುಖರಾಗಿ ದ್ರೋಹಿಗಳಾಗುವದು ನಮಗೆ ದೂರವಾಗಿರಲಿ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು. ಅಧ್ಯಾಯವನ್ನು ನೋಡಿ |
ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು.