Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:31 - ಪರಿಶುದ್ದ ಬೈಬಲ್‌

31 ಆಗ ಯಾಜಕನಾದ ಫೀನೆಹಾಸನು ಈ ಕುಲಗಳವರಿಗೆ, “ಯೆಹೋವನು ನಮ್ಮೊಂದಿಗಿದ್ದಾನೆಂಬುದು ಮತ್ತು ನೀವು ಆತನಿಗೆ ವಿರೋಧಿಗಳಾಗಿಲ್ಲವೆಂಬುದು ಈಗ ನಮಗೆ ತಿಳಿಯಿತು. ಯೆಹೋವನು ಇಸ್ರೇಲರನ್ನು ಶಿಕ್ಷಿಸುವುದಿಲ್ಲವೆಂದು ನಮಗೆ ಸಂತೋಷವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ, “ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆಂದು ಈಗ ಅರಿವಾಯಿತು. ನೀವು ಸರ್ವೇಶ್ವರಸ್ವಾಮಿಗೆ ವಿರುದ್ಧ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಇಸ್ರಯೇಲರನ್ನು ಆತನ ಶಿಕ್ಷಾಹಸ್ತದಿಂದ ತಪ್ಪಿಸಿದಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್ ಗಾದ್ ಮನಸ್ಸೆಕುಲಗಳವರಿಗೆ - ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದದರಿಂದ ಆತನು ನಮ್ಮ ಮಧ್ಯದಲ್ಲಿರುತ್ತಾನೆಂದು ಈಗ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲ್ಯರನ್ನು ಯೆಹೋವನ ಶಿಕ್ಷಾಹಸ್ತಕ್ಕೆ ತಪ್ಪಿಸಿದ್ದೀರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:31
13 ತಿಳಿವುಗಳ ಹೋಲಿಕೆ  

ಆ ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ಆ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.


ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು.


ಆಗ ಫೀನೆಹಾಸನು ಮತ್ತು ಕುಲಾಧಿಪತಿಗಳು ಆ ಸ್ಥಳದಿಂದ ತಮ್ಮ ಮನೆಗಳಿಗೆ ಹೋದರು. ಅವರು ರೂಬೇನ್ಯರನ್ನು ಮತ್ತು ಗಾದ್ಯರನ್ನು ಗಿಲ್ಯಾದ್ ಪ್ರದೇಶದಲ್ಲಿ ಬಿಟ್ಟು ಕಾನಾನಿಗೆ ಹಿಂತಿರುಗಿ ನಡೆದ ಸಂಗತಿಯನ್ನು ಇಸ್ರೇಲರಿಗೆ ತಿಳಿಸಿದರು.


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು