ಯೆಹೋಶುವ 22:32 - ಪರಿಶುದ್ದ ಬೈಬಲ್32 ಆಗ ಫೀನೆಹಾಸನು ಮತ್ತು ಕುಲಾಧಿಪತಿಗಳು ಆ ಸ್ಥಳದಿಂದ ತಮ್ಮ ಮನೆಗಳಿಗೆ ಹೋದರು. ಅವರು ರೂಬೇನ್ಯರನ್ನು ಮತ್ತು ಗಾದ್ಯರನ್ನು ಗಿಲ್ಯಾದ್ ಪ್ರದೇಶದಲ್ಲಿ ಬಿಟ್ಟು ಕಾನಾನಿಗೆ ಹಿಂತಿರುಗಿ ನಡೆದ ಸಂಗತಿಯನ್ನು ಇಸ್ರೇಲರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ಮತ್ತು ಮುಖ್ಯಸ್ಥರು ಗಿಲ್ಯಾದ್ ನಾಡಿನಲ್ಲಿದ್ದ ರೂಬೇನ್ಯರನ್ನು ಹಾಗೂ ಗಾದ್ಯರನ್ನು ಬೀಳ್ಕೊಟ್ಟು ಕಾನಾನ್ ನಾಡಿನಲ್ಲಿದ್ದ ಇಸ್ರಯೇಲರ ಬಳಿಗೆ ಬಂದು ಅವರಿಗೆ ಈ ಸಮಾಚಾರವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನೂ ಪ್ರಭುಗಳೂ ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲ್ಯರ ಬಳಿಗೆ ಬಂದು ಅವರಿಗೆ ಈ ವರ್ತಮಾನವನ್ನು ತಿಳಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯಾಜಕನಾದ ಎಲಿಯಾಜರನ ಮಗ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನ್ಯರನ್ನೂ ಗಾದ್ಯರನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲರ ಬಳಿಗೆ ತಿರುಗಿಬಂದು, ಅವರಿಗೆ ವರ್ತಮಾನವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿ |