ಯೆಹೋಶುವ 22:34 - ಪರಿಶುದ್ದ ಬೈಬಲ್34 ರೂಬೇನ್ಯರು ಮತ್ತು ಗಾದ್ಯರು, “ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಕೆಯೇ ಸಾಕ್ಷಿ” ಎಂದು ಅದಕ್ಕೆ “ಏದ್” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ರೂಬೇನ್ಯರು ಹಾಗೂ ಗಾದ್ಯರು ‘ಸರ್ವೇಶ್ವರನೇ ದೇವರು’ ಎಂಬುದಕ್ಕೆ ಈ ಬಲಿಪೀಠವೇ ಸಾಕ್ಷಿ ಎಂದು ಹೇಳಿ ಅದಕ್ಕೆ ‘ಏದ್’ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬದಕ್ಕೆ ಈ ವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ,” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |
ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.
ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.