Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:4 - ಪರಿಶುದ್ದ ಬೈಬಲ್‌

4 ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿದ್ದದರಿಂದ ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟ ಸ್ವಾಸ್ತ್ಯದಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:4
16 ತಿಳಿವುಗಳ ಹೋಲಿಕೆ  

ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು.


ಪ್ರತಿಯೊಬ್ಬ ಇಸ್ರೇಲನು ದೇಶದಲ್ಲಿ ತನಗೆ ಬರಬೇಕಾದ ಸ್ವಾಸ್ತ್ಯವನ್ನು ತೆಗೆದುಕೊಳ್ಳುವ ತನಕ ನಾವು ನಮ್ಮ ಮನೆಗಳಿಗೆ ಹೋಗುವುದಿಲ್ಲ.


ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’


ಮೋಶೆಯು ರೂಬೇನನ ಕುಲದ ಪ್ರತಿಯೊಂದು ಗೋತ್ರದವರಿಗೆ ಸ್ವಲ್ಪಸ್ವಲ್ಪ ಪ್ರದೇಶವನ್ನು ಕೊಟ್ಟಿದ್ದನು. ಅವರಿಗೆ ಕೊಟ್ಟ ಪ್ರದೇಶದ ವಿವರ ಹೀಗಿದೆ:


ನಾವು ಅವರ ದೇಶವನ್ನು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರಿಗೆ ಹಂಚಿದೆವು.


ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ.


ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.


ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.


ಈವರೆಗೆ ನೀವು ಇಸ್ರೇಲಿನ ಉಳಿದ ಜನರಿಗೆಲ್ಲ ಬೆಂಬಲ ಕೊಟ್ಟಿದ್ದೀರಿ. ನಿಮ್ಮ ದೇವರಾದ ಯೆಹೋವನು ಕೊಟ್ಟ ಎಲ್ಲ ಆಜ್ಞೆಗಳನ್ನು ನೀವು ಜಾಗರೂಕತೆಯಿಂದ ಪಾಲಿಸಿದ್ದೀರಿ.


ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು.


ಬಳಿಕ ತನ್ನ ಮಾತನ್ನು ಮುಂದುವರಿಸಿ, “ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ನಿಮಗೆ ಸಮಾಧಾನವನ್ನು ಅನುಗ್ರಹಿಸಿರುತ್ತಾನೆ. ನಮ್ಮ ಸುತ್ತಮುತ್ತಲಿನ ಶತ್ರುಗಳನ್ನು ಸೋಲಿಸಲು ಆತನು ನಮಗೆ ಸಹಾಯಮಾಡಿದ್ದಾನೆ. ಈಗ ಯೆಹೋವನೂ ಆತನ ಜನರೂ ಈ ದೇಶವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು