ಯೆಹೋಶುವ 22:5 - ಪರಿಶುದ್ದ ಬೈಬಲ್5 ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವಿಧಿಗಳನ್ನು ಜಾಗರೂಕತೆಯಿಂದ ಕೈಕೊಳ್ಳಿರಿ. ಹೀಗಿರಲಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನೇ ಹೊಂದಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಆತನನ್ನು ಸೇವಿಸಿರಿ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.