ಯೆಹೋಶುವ 22:6 - ಪರಿಶುದ್ದ ಬೈಬಲ್6 ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿಬಿಟ್ಟಾಗ ಅವರು ತಮ್ಮ ಗುಡಾರಗಳಿಗೆ ಹೋದರು. ಅಧ್ಯಾಯವನ್ನು ನೋಡಿ |
ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.