Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:9 - ಪರಿಶುದ್ದ ಬೈಬಲ್‌

9 ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲ್ಯರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವಾಸ್ತ್ಯವಾದ ಗಿಲ್ಯಾದ್ ದೇಶಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:9
19 ತಿಳಿವುಗಳ ಹೋಲಿಕೆ  

ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು.


ನಮ್ಮ ಹೆಂಡತಿಯರು, ಮಕ್ಕಳು, ಪಶುಗಳು ಮತ್ತು ಇತರ ಪ್ರಾಣಿಗಳು ಗಿಲ್ಯಾದಿನ ಊರುಗಳಲ್ಲಿ ವಾಸಿಸುವರು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.


ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ.


ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.


ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.


ಗಿಲ್ಯಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು.


ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಆ ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಞವೇದಿಕೆಯನ್ನು ಕಟ್ಟಿದರು.


ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು. ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಆಶೇರ್ ಕುಲದವರು ಸಮುದ್ರತೀರದಲ್ಲಿರುವ ತಮ್ಮ ಸುರಕ್ಷಿತವಾದ ಬಂದರುಗಳಲ್ಲಿ ಉಳಿದುಕೊಂಡರು.


ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.


ಬೆಳನ ಜನರು ಯೂಫ್ರೇಟೀಸ್ ನದಿಯ ಸಮೀಪದಲ್ಲಿರುವ ಮರುಭೂಮಿಯವರೆಗೂ ನೆಲೆಸಿದರು. ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದನಕರುಗಳು ಇದ್ದುದರಿಂದ ಗಿಲ್ಯಾದ್ ಪ್ರಾಂತ್ಯದಲ್ಲಿಯೇ ನೆಲೆಸಿದರು.


ಅದಕ್ಕೆ ಮೋಶೆ, “ನೀವು ನಿಮ್ಮ ಮಾತಿನಂತೆ ಯೆಹೋವನ ಮುಂದೆ ಸನ್ನದ್ಧರಾದ ಸೈನಿಕರಾಗಿ ಯುದ್ಧಕ್ಕೆ ಹೋಗುವುದಾದರೆ, ಯೆಹೋವನು ತನ್ನ ವೈರಿಗಳನ್ನು ಓಡಿಸುವ ತನಕ ಮತ್ತು ಆ ದೇಶವನ್ನು ಗೆದ್ದುಕೊಳ್ಳುವ ತನಕ ಪ್ರತಿಯೊಬ್ಬ ಪ್ರವೀಣ ಸೈನಿಕನು ಯೆಹೋವನ ಮುಂದೆ ಜೋರ್ಡನ್ ನದಿಯನ್ನು ದಾಟುವುದಾದರೆ, ಆ ಬಳಿಕ ನೀವು ನಿಮ್ಮ ಮನೆಗಳಿಗೆ ಹಿಂತಿರುಗಬಹುದು ಮತ್ತು ನೀವು ಯೆಹೋವನ ದೃಷ್ಟಿಯಲ್ಲಿಯೂ ಇಸ್ರೇಲರ ದೃಷ್ಟಿಯಲ್ಲಿಯೂ ನಿಮ್ಮ ಕರ್ತವ್ಯವನ್ನು ಮಾಡಿದವರಾಗಿರುವಿರಿ.


“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.


ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’


ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಜೆರಿಕೊ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು