Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:10 - ಪರಿಶುದ್ದ ಬೈಬಲ್‌

10 ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವದಕ್ಕೆ ಶಕ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:10
27 ತಿಳಿವುಗಳ ಹೋಲಿಕೆ  

ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.


ಆ ಪ್ರಾಂತ್ಯದ ಅರಸುಗಳಿಗೆ ನೀನು ಹೆದರಬೇಡ. ನಿನ್ನ ದೇವರಾದ ಯೆಹೋವನು ನಿನಗಾಗಿ ಯುದ್ಧ ಮಾಡುವನು’ ಎಂದು ಹೇಳಿದೆನು.


ಯೆಹೋವನು ನಿಮಗೋಸ್ಕರ ಯುದ್ಧಮಾಡುವನು. ಆದ್ದರಿಂದ ನೀವು ಸುಮ್ಮನೆ ಇರಿ” ಎಂದು ಹೇಳಿದನು.


ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗುವನು. ವೈರಿಗಳೊಂದಿಗೆ ಯುದ್ಧಮಾಡಲು ಆತನು ನಿಮಗೆ ಸಹಾಯ ಮಾಡುವನು ಮತ್ತು ನಿಮಗೆ ಜಯವನ್ನು ಕೊಡುವನು.’


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.


ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.


ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು.


ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.


‘ಇಸ್ರೇಲ್ ಜನರೇ, ನನ್ನ ಮಾತನ್ನು ಆಲಿಸಿರಿ. ಈ ದಿವಸ ನಿಮ್ಮ ವೈರಿಗಳೊಂದಿಗೆ ಕಾದಾಡಲು ಹೋಗುತ್ತಿದ್ದೀರಿ. ನೀವು ಅಧೈರ್ಯಗೊಳ್ಳಬೇಡಿರಿ. ಗಲಿಬಿಲಿಗೆ ಸಿಕ್ಕಿಕೊಳ್ಳಬೇಡಿ; ವೈರಿಗಳಿಗೆ ಭಯಪಡಬೇಡಿರಿ.


“ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.


ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.


ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.


ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


“ನೀವು ನಿಮ್ಮ ವೈರಿಗಳನ್ನು ಸೋಲಿಸಿ ಓಡಿಸಿಬಿಡುವಿರಿ. ನಿಮ್ಮ ಕತ್ತಿಗಳಿಂದ ಅವರನ್ನು ಕೊಲ್ಲುವಿರಿ.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು