Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:13 - ಪರಿಶುದ್ದ ಬೈಬಲ್‌

13 ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣುಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ಇಲ್ಲದಂತಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:13
24 ತಿಳಿವುಗಳ ಹೋಲಿಕೆ  

ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.


“ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.


ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ಅವರ ಮೇಜಿನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ.


ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.


ಇದಾದ ನಂತರ, ಕನಿಷ್ಠರಾದವರೂ ಮತ್ತು ಅತಿ ಮುಖ್ಯರೂ ಆದ ಜನರೆಲ್ಲರು ಮತ್ತು ಸೇನೆಯ ನಾಯಕರು ಬಾಬಿಲೋನಿನವರಿಗೆ ಹೆದರಿಕೊಂಡು ಈಜಿಪ್ಟಿಗೆ ಓಡಿಹೋದರು.


ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹುಕಾಲದವರೆಗೆ ಜೀವಿಸುವುದಿಲ್ಲ.


ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.


ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.


ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.


ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”


ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಆ ಜನಾಂಗದವರು ಇನ್ನೂ ಈ ಪ್ರದೇಶದಲ್ಲಿದ್ದರು. ಈ ಪ್ರದೇಶದಲ್ಲಿ ವಾಸಿಸಲು ಆ ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು