ಯೆಹೋಶುವ 23:14 - ಪರಿಶುದ್ದ ಬೈಬಲ್14 “ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನೂ ಈಗ ಅನುಸರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ; ಎಲ್ಲವೂ ತಪ್ಪದೆ ನೆರವೇರಿದವೆಂಬದು ನಿಮಗೆ ಮಂದಟ್ಟಾಯಿತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು. ಅಧ್ಯಾಯವನ್ನು ನೋಡಿ |
ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.
ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.