ಯೆಹೋಶುವ 23:16 - ಪರಿಶುದ್ದ ಬೈಬಲ್16 ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು. ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
“ಆದರೆ ನೀನಾಗಲಿ ನಿನ್ನ ಮಕ್ಕಳಾಗಲಿ ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದರೆ, ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ಅನುಸರಿಸದಿದ್ದರೆ, ಅನ್ಯದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ನೀನು ಮಾಡಿದರೆ, ನಾನು ದಯಪಾಲಿಸಿರುವ ದೇಶವನ್ನು ಬಿಟ್ಟುಹೋಗುವಂತೆ ನಾನು ಇಸ್ರೇಲರನ್ನು ಬಲಾತ್ಕರಿಸುತ್ತೇನೆ. ಅನ್ಯಜನರಿಗೆ ಇಸ್ರೇಲರು ಉದಾಹರಣೆಯಾಗುತ್ತಾರೆ. ಅನ್ಯಜನರು ಇಸ್ರೇಲರನ್ನು ಅಪಹಾಸ್ಯ ಮಾಡುತ್ತಾರೆ. ನಾನು ಈ ಆಲಯವನ್ನು ಪವಿತ್ರವನ್ನಾಗಿಸಿದೆ. ಜನರು ನನ್ನನ್ನು ಗೌರವಿಸುವ ಸ್ಥಳ ಅದಾಗಿದೆ. ಆದರೆ ನೀನು ನನ್ನನ್ನು ಅನುಸರಿಸದೆ ಇದ್ದರೆ, ಆಗ ನಾನದನ್ನು ಧೂಳೀಪಟ ಮಾಡುತ್ತೇನೆ.