ಯೆಹೋಶುವ 23:2 - ಪರಿಶುದ್ದ ಬೈಬಲ್2 ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, “ನಾನು ಬಹಳ ಮುದುಕನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದಿನತುಂಬಿದ ಮುದುಕನಾದ ಯೆಹೋಶುವನು ಇಸ್ರಾಯೇಲ್ಯರ ಹಿರಿಯರು, ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಇವರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ತನ್ನ ಬಳಿಗೆ ಕರಿಸಿ ಅವರಿಗೆ - ನಾನು ದಿನತುಂಬಿದ ಮುದುಕನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಂದು ದಿನ ಅವನು ಸಮಸ್ತ ಇಸ್ರಾಯೇಲರನ್ನೂ ಅವರ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿ ಅವರಿಗೆ, “ನಾನು ದಿನತುಂಬಿದ ವೃದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.