Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:7 - ಪರಿಶುದ್ದ ಬೈಬಲ್‌

7 ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಉಳಿದಿರುವ ಈ ಜನಾಂಗಗಳ ಜೊತೆಯಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಲೂ ಪ್ರಮಾಣಮಾಡಲೂಬಾರದು, ಅವುಗಳಿಗೆ ಅಡ್ಡಬಿದ್ದು ಸೇವಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:7
23 ತಿಳಿವುಗಳ ಹೋಲಿಕೆ  

“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.


ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.


ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”


ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.


ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ಕೆಡುಕರ ಮಾರ್ಗದಲ್ಲಿ ನಡೆಯಬೇಡ. ಅವರಂತೆ ಜೀವಿಸಬೇಡ.


“ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,


ನಾನು ಆಕೆಯ ಬಾಯಿಯಿಂದ ಬಾಳ್ ದೇವರುಗಳ ಹೆಸರನ್ನು ತೆಗೆದುಬಿಡುವೆನು. ಆಮೇಲೆ ಜನರು ಎಂದಿಗೂ ಬಾಳನ ಹೆಸರೆನ್ನೆತ್ತುವದಿಲ್ಲ.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.


“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ.


ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.


“ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.


ಇತರ ದೇವರುಗಳನ್ನು ಅವಲಂಭಿಸಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು.


ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ. ನನ್ನ ಒಡೆಯನಾದ ಅರಾಮ್ಯರ ರಾಜನು ಸುಳ್ಳುದೇವರಾದ ರಿಮ್ಮೋನನನ್ನು ಪೂಜಿಸಲು ಅವನ ಆಲಯಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವರಿಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದು ಹೇಳಿದನು.


ಅವರು ವಿಗ್ರಹಗಳ ಸೇವೆಮಾಡಿದರು. ಯೆಹೋವನು ಇಸ್ರೇಲರಿಗೆ, “ನೀವು ವಿಗ್ರಹಗಳನ್ನು ಪೂಜಿಸಲೇಬಾರದು” ಎಂದು ಹೇಳಿದ್ದನು.


“ಆದರೆ ನಾನು ಕೊಟ್ಟ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ನೀನು ಮೀರಿ ಇತರ ದೇವರುಗಳನ್ನು ಪೂಜಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು