ಯೆಹೋಶುವ 23:9 - ಪರಿಶುದ್ದ ಬೈಬಲ್9 “ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಮಹಾಪರಾಕ್ರವಿುಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ; ನಿಮ್ಮ ಮುಂದೆ ಈವರೆಗೆ ಒಬ್ಬನೂ ನಿಲ್ಲಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು. ಅಧ್ಯಾಯವನ್ನು ನೋಡಿ |
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.