Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:11 - ಪರಿಶುದ್ದ ಬೈಬಲ್‌

11 “‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:11
25 ತಿಳಿವುಗಳ ಹೋಲಿಕೆ  

ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.


ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ?


ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು.


ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.


ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ಈ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ ಎಂದು ನೀವು ಮಕ್ಕಳಿಗೆ ಹೇಳಬೇಕು.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


“ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.


ಇದು ಕೇನಿಯರ, ಕೆನಿಜೀಯರ, ಕದ್ಮೋನಿಯರ,


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.


ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಆಗ ಯೆಹೋವನು ಯೆಹೋಶುವನಿಗೆ,


ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.


ಈ ಎಲ್ಲ ಅರಸರು ಒಂದು ಕಡೆ ಸೇರಿದರು. ಅವರು ಯೆಹೋಶುವನ ಮತ್ತು ಇಸ್ರೇಲರ ವಿರುದ್ಧ ಯುದ್ಧ ಮಾಡುವ ಯೋಜನೆಗಳನ್ನು ಹಾಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು