Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:15 - ಪರಿಶುದ್ದ ಬೈಬಲ್‌

15 “ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:15
22 ತಿಳಿವುಗಳ ಹೋಲಿಕೆ  

ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.


ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?


ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ಅವು ನಿಮ್ಮ ಸುತ್ತಮುತ್ತಲಿರುವ ಬೇರೆ ದೇಶಗಳಲ್ಲಿ ವಾಸವಾಗಿರುವ ಜನರ ದೇವರುಗಳು, ಅವುಗಳಲ್ಲಿ ಕೆಲವು ಹತ್ತಿರದವುಗಳಾಗಿವೆ; ಕೆಲವು ದೂರದವುಗಳಾಗಿವೆ.)


“ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.


ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.


ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.


ಅರಸನೇ, ಒಂದುವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವುದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವುದಿಲ್ಲ. ಇದು ನಿನಗೆ ತಿಳಿದಿರಲಿ” ಎಂದು ಖಂಡಿತವಾಗಿ ಹೇಳಿದರು.


ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


ಬಳಿಕ ಆ ವ್ಯಕ್ತಿಯು ಗೋಡೆಗಳಲ್ಲಿ ಹೊಸ ಕಲ್ಲುಗಳನ್ನು ಇಡಿಸಿ ಹೊಸ ಮಡ್ಡಿ ಮಾಡಿಸಬೇಕು.


ಇದಲ್ಲದೆ ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು