ಯೆಹೋಶುವ 24:18 - ಪರಿಶುದ್ದ ಬೈಬಲ್18 ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಈ ದೇಶವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವಜನಾಂಗಗಳನ್ನು ನಮ್ಮ ಮುಂದೆ ಹೊರಡಿಸಿ ಬಿಟ್ಟವನು ಆತನೇ. ಆದದರಿಂದ ನಾವೂ ಯೆಹೋವನನ್ನೇ ಸೇವಿಸುವೆವು; ಆತನೇ ನಮ್ಮ ದೇವರು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು. ಅಧ್ಯಾಯವನ್ನು ನೋಡಿ |
ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.