2 ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
2 ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
2 ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
2 ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
2 ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?” ಎಂದು ಹೇಳಿದನು.
ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”
ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.
ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.
ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.
ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)