ಯೆಹೋಶುವ 24:26 - ಪರಿಶುದ್ದ ಬೈಬಲ್26 ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದಲ್ಲದೆ ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲೇ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು. ಅಧ್ಯಾಯವನ್ನು ನೋಡಿ |