Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:27 - ಪರಿಶುದ್ದ ಬೈಬಲ್‌

27 ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎಲ್ಲಾ ಜನರಿಗೆ - ಇಗೋ, ಈ ಕಲ್ಲು ನಮ್ಮ ವಿಷಯದಲ್ಲಿ ಸಾಕ್ಷಿ ಹೇಳುವದು. ಯೆಹೋವನು ನಮಗೆ ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿರುವದರಿಂದ ನೀವು ನಿಮ್ಮ ದೇವರಾದ ಆತನನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧಸಾಕ್ಷಿಯಾಗಿರುವದು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:27
23 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಈ ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು.


ರೂಬೇನ್ಯರು ಮತ್ತು ಗಾದ್ಯರು, “ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಕೆಯೇ ಸಾಕ್ಷಿ” ಎಂದು ಅದಕ್ಕೆ “ಏದ್” ಎಂದು ಹೆಸರಿಟ್ಟರು.


ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.


ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


“ಆಕಾಶವೇ, ನಾನು ಹೇಳುವುದನ್ನು ಕೇಳು. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಆಲಿಸು.


ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


“ಆದ್ದರಿಂದ ನೀನು ಈ ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಈ ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.


“ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಮುಂದೆ ತೆರೆದ ಬಾಗಿಲನ್ನು ಇಟ್ಟಿದ್ದೇನೆ. ಅದನ್ನು ಯಾರೂ ಮುಚ್ಚಲಾರರು. ನೀನು ದುರ್ಬಲನೆಂಬುದು ನನಗೆ ತಿಳಿದಿದೆ. ಆದರೆ ನೀನು ನನ್ನ ಬೋಧನೆಯನ್ನು ಅನುಸರಿಸಿದೆ. ನನ್ನ ಹೆಸರನ್ನು ಹೇಳಲು ನೀನು ಹಿಂಜರಿಯಲಿಲ್ಲ.


ಗೋಡೆಯ ಕಲ್ಲುಗಳು ನಿನಗೆ ವಿರುದ್ಧವಾಗಿ ಕೂಗುವವು. ನಿನ್ನ ಮನೆಯ ಮರದ ಜಂತೆಗಳು ಸಹ ನೀನು ಅಪರಾಧಿಯೆಂದು ಸಾಕ್ಷಿ ಹೇಳುವವು.


ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”


ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು.


ನಾನು ಅವುಗಳಲ್ಲಿ ಯಾವುದನ್ನೇ ಮಾಡಿದ್ದರೂ ನನಗೆ ಶಿಕ್ಷೆಯಾಗುತ್ತಿತ್ತು. ಯಾಕೆಂದರೆ ಆಗ ನಾನು ಸರ್ವಶಕ್ತನಾದ ದೇವರಿಗೆ ಅಪನಂಬಿಗಸ್ತನಾಗುತ್ತಿದ್ದೆನು.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು