Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:29 - ಪರಿಶುದ್ದ ಬೈಬಲ್‌

29 ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರಹತ್ತು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದಾದ ಮೇಲೆ ಸರ್ವೇಶ್ವರನ ದಾಸನಾದ ನೂನನ ಮಗ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರುಷದವನಾಗಿ ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇವುಗಳಾದ ತರುವಾಯ ನೂನನ ಮಗ ಯೆಹೋಶುವನೆಂಬ ಯೆಹೋವ ದೇವರ ಸೇವಕನು ನೂರಹತ್ತು ವರುಷ ವಯಸ್ಸಿನವನಾಗಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:29
10 ತಿಳಿವುಗಳ ಹೋಲಿಕೆ  

ನೂನನ ಮಗನಾದ ಮತ್ತು ಯೆಹೋವನ ಸೇವಕನಾದ ಯೆಹೋಶುವನು ನೂರಹತ್ತು ವರ್ಷ ಬದುಕಿ ಮರಣ ಹೊಂದಿದನು.


ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.


ಸತ್ತುಹೋದವರು ಯೆಹೋವನನ್ನು ಕೊಂಡಾಡುವುದಿಲ್ಲ. ಸಮಾಧಿಯೊಳಗಿರುವವರು ಆತನನ್ನು ಸ್ತುತಿಸುವುದಿಲ್ಲ.


ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.


ಯೋಸೇಫನು ತನ್ನ ನೂರಹತ್ತನೆ ವರ್ಷದಲ್ಲಿ ತೀರಿಕೊಂಡನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿಗೆ ಸಿದ್ಧಪಡಿಸಿ ಶವಪೆಟ್ಟಿಗೆಯಲ್ಲಿಟ್ಟರು.


ಯೋಸೇಫನು ತನ್ನ ತಂದೆಯ ಕುಟುಂಬದವರೊಂದಿಗೆ ಈಜಿಪ್ಟಿನಲ್ಲೇ ವಾಸವಾಗಿದ್ದನು. ಯೋಸೇಫನು ತನ್ನ ನೂರಹತ್ತನೆಯ ವರ್ಷದಲ್ಲಿ ತೀರಿಕೊಂಡನು.


ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು.


ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.


ಇಸ್ರೇಲರು ಯೆಹೋಶುವನನ್ನು ಅವನ ಸ್ವಾಸ್ತ್ಯ ಭೂಮಿಯಲ್ಲಿ ಸಮಾಧಿ ಮಾಡಿದರು. ಅದು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿ ತಿಮ್ನತ್ ಹೆರೆಸಿನಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು