Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:3 - ಪರಿಶುದ್ದ ಬೈಬಲ್‌

3 ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಆ ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು, ಕಾನಾನ್ ನಾಡಿನಲ್ಲೆಲ್ಲಾ ಸಂಚಾರ ಮಾಡಿಸಿದೆ. ಇಸಾಕನೆಂಬ ಮಗನನ್ನು ಕೊಟ್ಟು, ಅವನ ಸಂತಾನವನ್ನು ಹೆಚ್ಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿಸಿ ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿ ಇದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ಕರೆದುಕೊಂಡು ಬಂದು, ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ, ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು. ಅವನಿಗೆ ಇಸಾಕನನ್ನು ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:3
7 ತಿಳಿವುಗಳ ಹೋಲಿಕೆ  

ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು