Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:5 - ಪರಿಶುದ್ದ ಬೈಬಲ್‌

5 “‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತರುವಾಯ ನಾನು ಮೋಶೆ ಆರೋನರನ್ನು ಕಳುಹಿಸಿ ಆ ಐಗುಪ್ತ್ಯರಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ ಅವರನ್ನು ಬಾಧಿಸಿ ನಿಮ್ಮನ್ನು ಹೊರಗೆ ಕರತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ, ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಈಜಿಪ್ಟನ್ನು ಬಾಧಿಸಿದೆನು. ತರುವಾಯ ನಿಮ್ಮನ್ನು ಹೊರಗೆ ತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:5
13 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.


ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)


ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು.


ಇಸ್ರೇಲರು ಈಜಿಪ್ಟಿನಿಂದ ಹೊರಟುಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ.


ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು.


ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು