Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:7 - ಪರಿಶುದ್ದ ಬೈಬಲ್‌

7 ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. “‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನುಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತ್ಯರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬದಕ್ಕೆ ನೀವು ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:7
14 ತಿಳಿವುಗಳ ಹೋಲಿಕೆ  

ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ಆ ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ.


ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.


ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.


ಮೋಶೆಯು ಇಸ್ರೇಲರ ಜನಸಮೂಹವನ್ನು ಕರೆದು, “ಈಜಿಪ್ಟ್ ದೇಶದಲ್ಲಿ ಯೆಹೋವನು ನಡಿಸಿದ ಕಾರ್ಯಗಳನ್ನೆಲ್ಲಾ ನೀವು ನೋಡಿದ್ದೀರಿ. ಆತನು ಫರೋಹನಿಗೂ ಅವನ ಪರಿವಾರದವರಿಗೂ ಮತ್ತು ಇಡೀ ಈಜಿಪ್ಟಿನವರಿಗೂ ಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಹೀಗೆ ನೀವು ಕಾದೇಶಿನಲ್ಲಿ ತುಂಬ ದಿನಗಳನ್ನು ಕಳೆದಿರುವಿರಿ.


ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.


ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು