ಯೆಹೋಶುವ 24:9 - ಪರಿಶುದ್ದ ಬೈಬಲ್9 “‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಮೇಲೆ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಯೇಲರಾದ ನಿಮ್ಮ ವಿರುದ್ಧ ಯುದ್ಧಮಾಡಲು ಎದ್ದ. ನಿಮ್ಮನ್ನು ಶಪಿಸಲು ಬೆಯೋರನ ಮಗ ಬಿಳಾಮನಿಗೆ ಕರೆ ಕಳುಹಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲ್ಯರಾದ ನಿಮಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ದು ನಿಮ್ಮನ್ನು ಶಪಿಸುವದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೇಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗನಾದ ಬಾಲಾಕನು ಎದ್ದು, ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು. ಅಧ್ಯಾಯವನ್ನು ನೋಡಿ |
ಅವರು ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ಪ್ರದೇಶವನ್ನು ದಾಟಿಹೋಗುವುದಕ್ಕೆ ದಯವಿಟ್ಟು ಅನುಮತಿಕೊಡು’ ಎಂದು ಕೇಳಿಕೊಂಡರು. ಆದರೆ ಎದೋಮಿನ ಅರಸನು ಅವರಿಗೆ ತಮ್ಮ ದೇಶವನ್ನು ದಾಟಿಹೋಗಲು ಅನುಮತಿಕೊಡಲಿಲ್ಲ. ತರುವಾಯ ಅವರು ಮೋವಾಬ್ಯರ ಅರಸನ ಬಳಿಗೆ ಅದೇ ಸಂದೇಶವನ್ನು ಕಳುಹಿಸಿದರು. ಆದರೆ ಮೋವಾಬ್ಯರ ಅರಸನು ಸಹ ಅವರಿಗೆ ಅವರ ದೇಶವನ್ನು ದಾಟಿಹೋಗಲು ಅನುಮತಿ ಕೊಡಲಿಲ್ಲ. ಆದ್ದರಿಂದ ಇಸ್ರೇಲರು ಕಾದೇಶಿನಲ್ಲಿ ನೆಲೆನಿಂತರು.