Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:1 - ಪರಿಶುದ್ದ ಬೈಬಲ್‌

1 ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋಶುವನು ಬೆಳಿಗ್ಗೆ ಎದ್ದನು; ಅವನೂ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:1
16 ತಿಳಿವುಗಳ ಹೋಲಿಕೆ  

ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.


ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.


ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದೆನು.


ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.


ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.


ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.


ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಪುನಃ ಹೊತ್ತುಕೊಂಡು ಹೋದರು.


ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು.


ಮಾರನೆಯ ದಿನ, ಬೆಳಿಗ್ಗೆ ಯೆಹೋಶುವನು ಇಸ್ರೇಲಿನ ಎಲ್ಲ ಜನರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದನು. ಎಲ್ಲ ಕುಲಗಳು ಯೆಹೋವನ ಮುಂದೆ ನಿಂತುಕೊಂಡವು. ಯೆಹೋವನು ಯೆಹೂದ ಕುಲವನ್ನು ಸೂಚಿಸಿದನು.


ಮರುದಿನ ಬೆಳಿಗ್ಗೆ ಯೆಹೋಶುವನು ಎಲ್ಲ ಜನರನ್ನು ಒಂದು ಕಡೆ ಬೇಗನೆ ಸೇರಿಸಿದನು. ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ನಾಯಕರು ಜನರನ್ನು “ಆಯಿ”ಗೆ ಮುನ್ನಡೆಸಿದರು.


ಮರುದಿನ ಬೆಳಿಗ್ಗೆ ಇಸ್ರೇಲರು ಎದ್ದು ಗಿಬೆಯ ನಗರದ ಹತ್ತಿರ ಪಾಳೆಯ ಮಾಡಿಕೊಂಡರು.


ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು