ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.
ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.
ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.
“‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.