Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:15 - ಪರಿಶುದ್ದ ಬೈಬಲ್‌

15 (ಆಗ ಸುಗ್ಗಿಕಾಲವಾದ್ದರಿಂದ ಜೋರ್ಡನ್ ನದಿಯು ದಡಮೀರಿ ಹರಿಯುತ್ತಿತ್ತು.) ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ತೀರಕ್ಕೆ ಬಂದರು. ಅವರು ನೀರಿನಲ್ಲಿ ಹೆಜ್ಜೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:15
12 ತಿಳಿವುಗಳ ಹೋಲಿಕೆ  

ಜೋರ್ಡನ್ ನದಿಯು ದಡಮೀರಿ ಹರಿಯುತ್ತಿರುವಾಗ ಗಾದ್ ಕುಲದವರು ಅದನ್ನು ದಾಟಿ ಆಚೆಪ್ರದೇಶದಲ್ಲಿ ವಾಸವಾಗಿದ್ದ ಜನರನ್ನೆಲ್ಲಾ ಪೂರ್ವಕ್ಕೂ ಪಶ್ಚಿಮಕ್ಕೂ ಓಡಿಸಿ ಅವರ ಸ್ಥಳವನ್ನು ಆಕ್ರಮಿಸಿಕೊಂಡರು.


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


“ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗೆಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ಡನ್ ನದಿ ದಡದ ಭಯಾನಕ ಮುಳ್ಳುಕಂಟಿಯ ಪ್ರದೇಶಕ್ಕೆ ಬಂದಾಗ ಏನು ಮಾಡುವೆ?


ಯಾಜಕರು ಯೆಹೋಶುವನ ಆಜ್ಞೆಯಂತೆ ಪವಿತ್ರ ಪೆಟ್ಟಿಗೆಯನ್ನು ತಮ್ಮ ಸಂಗಡ ತೆಗೆದುಕೊಂಡು ನದಿಯಿಂದ ಹೊರಗಡೆ ಬಂದರು. ಯಾಜಕರ ಪಾದಗಳು ನದಿಯ ಆಚೆದಡದ ನೆಲವನ್ನು ಮುಟ್ಟಿದ ಕೂಡಲೇ ನದಿಯ ನೀರು ಮತ್ತೆ ಹರಿಯುವುದಕ್ಕೆ ಆರಂಭಿಸಿತು. ಜನರು ದಾಟುವುದಕ್ಕಿಂತ ಮುಂಚೆ ಹರಿಯುತ್ತಿದ್ದಂತೆ ನೀರು ಮತ್ತೆ ದಡಮೀರಿ ಹರಿಯಿತು.


ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.


ಅದು ಕಾಲುತುಳಿತಕ್ಕೆ ಈಡಾಗಿದೆ. ಆಗ ದೀನರೂ ಬಡಜನರೂ ಆ ಅವಶೇಷಗಳ ಮೇಲೆ ನಡೆಯುವರು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು.


ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.


ಬೆನ್ಯಾಮೀನ್ ಮತ್ತು ಯೆಹೂದ ಕುಲದ ಇತರ ಜನರೂ ದಾವೀದನು ಕೋಟೆಯಲ್ಲಿ ದಾವೀದನೊಂದಿಗೆ ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು