Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:16 - ಪರಿಶುದ್ದ ಬೈಬಲ್‌

16 ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:16
31 ತಿಳಿವುಗಳ ಹೋಲಿಕೆ  

ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.


ಈ ವಸ್ತುಗಳನ್ನು ಮಾಡಲು ಉಪಯೋಗಿಸಿದ ಹಿತ್ತಾಳೆಯನ್ನು ಸೊಲೊಮೋನನು ತೂಕಹಾಕಲೇ ಇಲ್ಲ. ಯಾಕೆಂದರೆ ತೂಕ ಮಾಡಲಾಗದಷ್ಟು ವಸ್ತುಗಳು ಅಲ್ಲಿದ್ದವು. ಆದ್ದರಿಂದ ಹಿತ್ತಾಳೆಯ ಒಟ್ಟು ತೂಕವು ತಿಳಿಯಲೇ ಇಲ್ಲ. ಈ ವಸ್ತುಗಳನ್ನು ಸುಕ್ಕೋತ್ ಮತ್ತು ಚಾರೆತಾನ್‌ಗಳ ನಡುವೆ ಜೋರ್ಡನ್ ನದಿಯ ಹತ್ತಿರ ತಯಾರಿಸಲು ರಾಜನು ಆಜ್ಞಾಪಿಸಿದನು. ಅವರು ಹಿತ್ತಾಳೆಯನ್ನು ಕರಗಿಸಿ, ಅದನ್ನು ಮಣ್ಣಿನ ನೆಲದ ಅಚ್ಚುಗಳಲ್ಲಿ ಸುರಿದು ಈ ವಸ್ತುಗಳನ್ನು ಮಾಡಿದರು.


ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.


ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).


ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು.


ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.


ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ.


ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.


ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.


ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ.


ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.


ಯೆಹೂದ್ಯರ ಸ್ವಾಸ್ತ್ಯವು ಲವಣಸಮುದ್ರದ ದಕ್ಷಿಣ ತೀರದಿಂದ ಆರಂಭವಾಗಿತ್ತು.


ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.


ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು.


ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು.


ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ?


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಅವನು ನನ್ನೊಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ.


ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.


ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?


ಇಸ್ರೇಲರು ಒಣನೆಲದ ಮೇಲೆ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.


ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.


ನೀನು ಊದಿದ ಮಹಾಗಾಳಿಯಿಂದ ನೀರು ಒತ್ತಟ್ಟಿಗೆ ಸೇರಿತು. ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು.


‘ಇಸ್ರೇಲಿನ ಜನರು ಜೋರ್ಡನ್ ನದಿಯನ್ನು ಒಣನೆಲದ ಮೇಲೆ ಹೇಗೆ ದಾಟಿದರು ಎಂಬುದನ್ನು ನಮ್ಮ ನೆನಪಿಗೆ ತರಲು ಈ ಕಲ್ಲುಗಳು ಸಹಾಯಕವಾಗಿವೆ.’


ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.


ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್‌ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.


ಅಲ್ಲಿಂದ ಆ ಸೀಮೆಯು ಯಾನೋಹ ಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತದೆ. ಆ ಸೀಮೆಯು ಜೆರಿಕೊವಿನವರೆಗೆ ಮುನ್ನಡೆದು ಜೋರ್ಡನ್ ನದಿಯ ಹತ್ತಿರ ಮುಗಿಯುತ್ತದೆ.


ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.


ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು