ಯೆಹೋಶುವ 3:17 - ಪರಿಶುದ್ದ ಬೈಬಲ್17 ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು. ಅಧ್ಯಾಯವನ್ನು ನೋಡಿ |