Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:3 - ಪರಿಶುದ್ದ ಬೈಬಲ್‌

3 “ಯಾಜಕರು ಮತ್ತು ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷ ಹೊತ್ತಿರುವದನ್ನು ಕಂಡಕೂಡಲೆ ನೀವೂ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:3
20 ತಿಳಿವುಗಳ ಹೋಲಿಕೆ  

ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು.


ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿರುವ ಯಾಜಕರಿಗೆ, ‘ನೀವು ಜೋರ್ಡನ್ ನದಿಯ ತೀರಕ್ಕೆ ಹೋಗಿ, ನೀರಿನೊಳಗೆ ಕಾಲಿಡದೆ ಅದರ ಅಂಚಿನಲ್ಲೇ ನಿಂತುಕೊಳ್ಳಿರಿ’ ಎಂದು ಹೇಳು” ಅಂದನು.


ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆಗ ಧರ್ಮೋಪದೇಶಕನು ಯೇಸುವಿನ ಬಳಿಗೆ ಬಂದು, “ಬೋಧಕನೇ, ನೀನು ಯಾವ ಸ್ಥಳಕ್ಕೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.


ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದಾಬನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.


ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು.


ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು.


ಇಸ್ರೇಲಿನ ಹಿರಿಯರೆಲ್ಲರು ಆ ಸ್ಥಳದಲ್ಲಿ ಒಟ್ಟುಗೂಡಿದರು. ನಂತರ ಯಾಜಕರು ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡರು.


ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು