ಯೆಹೋಶುವ 3:4 - ಪರಿಶುದ್ದ ಬೈಬಲ್4 ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗತಕ್ಕ ಮಾರ್ಗವು ನಿಮಗೆ ಗೊತ್ತಾಗುವದು; ಆ ಮಾರ್ಗದಲ್ಲಿ ನೀವು ಮುಂಚೆ ಬರಲಿಲ್ಲವಲ್ಲಾ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |
ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.