ಯೆಹೋಶುವ 4:18 - ಪರಿಶುದ್ದ ಬೈಬಲ್18 ಯಾಜಕರು ಯೆಹೋಶುವನ ಆಜ್ಞೆಯಂತೆ ಪವಿತ್ರ ಪೆಟ್ಟಿಗೆಯನ್ನು ತಮ್ಮ ಸಂಗಡ ತೆಗೆದುಕೊಂಡು ನದಿಯಿಂದ ಹೊರಗಡೆ ಬಂದರು. ಯಾಜಕರ ಪಾದಗಳು ನದಿಯ ಆಚೆದಡದ ನೆಲವನ್ನು ಮುಟ್ಟಿದ ಕೂಡಲೇ ನದಿಯ ನೀರು ಮತ್ತೆ ಹರಿಯುವುದಕ್ಕೆ ಆರಂಭಿಸಿತು. ಜನರು ದಾಟುವುದಕ್ಕಿಂತ ಮುಂಚೆ ಹರಿಯುತ್ತಿದ್ದಂತೆ ನೀರು ಮತ್ತೆ ದಡಮೀರಿ ಹರಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನಿಂದ ಮೇಲೆ ಬಂದು ಒಣನೆಲದಲ್ಲಿ ಕಾಲಿಟ್ಟ ಕೂಡಲೇ ನೀರು ಮುಂಚಿನಂತೆ ಬಂದು ಜೋರ್ಡನ್ ನದಿಯ ದಡಮೀರಿ ಹರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೆ ನೀರು ಮುಂಚಿನಂತೆ ಬಂದು ಯೊರ್ದನ್ ಹೊಳೆಯು ದಡಮೀರಿ ಹರಿಯಹತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿ ಮಧ್ಯದಲ್ಲಿಂದ ಏರಿ, ತಮ್ಮ ಅಂಗಾಲುಗಳನ್ನು ಒಣನೆಲದ ಮೇಲೆ ಇಟ್ಟಕೂಡಲೇ ನೀರು ಮುಂಚಿನಂತೆ ಬಂದು ಯೊರ್ದನ್ ನದಿಯ ದಡ ತುಂಬಿ ಹರಿಯಿತು. ಅಧ್ಯಾಯವನ್ನು ನೋಡಿ |