ಯೆಹೋಶುವ 4:7 - ಪರಿಶುದ್ದ ಬೈಬಲ್7 ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು. ಅಧ್ಯಾಯವನ್ನು ನೋಡಿ |
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.