Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:9 - ಪರಿಶುದ್ದ ಬೈಬಲ್‌

9 (ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ಜೋರ್ಡನ್ ನದಿಯ ಮಧ್ಯದಲ್ಲಿ ಅಂದರೆ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುವಾಗ ಯಾಜಕರು ನಿಂತಿದ್ದ ಸ್ಥಳದಲ್ಲಿ ಇಟ್ಟನು. ಆ ಕಲ್ಲುಗಳು ಇಂದಿಗೂ ಆ ಸ್ಥಳದಲ್ಲಿವೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಜೋರ್ಡನಿನ ಮಧ್ಯೆ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋಶುವನು ಯೊರ್ದನ್ ನದಿ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ಇಟ್ಟ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದವರೆಗೂ ಅಲ್ಲಿಯೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:9
16 ತಿಳಿವುಗಳ ಹೋಲಿಕೆ  

ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ಆ ಪೆಟ್ಟಿಗೆಯನ್ನು ಹೊರಲು ಜೋಡಿಸಿದ್ದ ಕೋಲುಗಳು ಉದ್ದವಾಗಿದ್ದ ಕಾರಣ ಅದರ ಕೊನೆಗಳು ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಕಾಣುತ್ತಿದ್ದವು. ಆದರೆ ದೇವಾಲಯದ ಹೊರಗಿನಿಂದ ಆ ಕೋಲುಗಳು ಯಾರಿಗೂ ಕಾಣುತ್ತಿರಲಿಲ್ಲ. ಇಂದಿಗೂ ಆ ಕೋಲುಗಳು ಅಲ್ಲಿಯೇ ಅವೆ.


ಬೇರೋತಿನ ಜನರು ಗಿತ್ತಯಿಮಿಗೆ ಓಡಿಹೋದರು. ಅವರು ಇವತ್ತಿನವರೆಗೂ ಅಲ್ಲಿ ನೆಲೆಸಿದ್ದಾರೆ.


ಇಸ್ರೇಲಿಗೆ ದಾವೀದನು ಇದನ್ನು ಆಜ್ಞೆಯನ್ನಾಗಿ ಮತ್ತು ನಿಯಮವನ್ನಾಗಿ ಮಾಡಿದನು. ಈ ನಿಯಮವು ಇವತ್ತಿಗೂ ಮುಂದುವರಿಯುತ್ತಿದೆ.


ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲೊಂದು ನಗರವನ್ನು ಕಟ್ಟಿದನು. ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಇಂದಿಗೂ ಆ ಪಟ್ಟಣದ ಹೆಸರು ಲೂಜ್ ಎಂದೇ ಇದೆ.


ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.


ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ.


ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.


ಆದ್ದರಿಂದ ಇಸಾಕನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಇಂದಿಗೂ ಆ ನಗರಕ್ಕೆ ಬೇರ್ಷೆಬ ಎಂದು ಕರೆಯುತ್ತಾರೆ.


ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.


ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.


ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು