ಯೆಹೋಶುವ 5:1 - ಪರಿಶುದ್ದ ಬೈಬಲ್1 ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು. ಅಧ್ಯಾಯವನ್ನು ನೋಡಿ |
ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.
ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.
(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.